Spread The Love

ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 17ನೇ ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದೇ ಮಾರ್ಚ್ 22ರಂದು ಸಾಂಪ್ರದಾಯಿಕ ಎದುರಾಳಿಗಳಾದ ಸಿಎಸ್‌ಕೆ ಮತ್ತು ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯದ ಮುಖಾಮುಖಿಯೊಂದಿಗೆ ಅದ್ಧೂರಿ ಚಾಲನೆ ಸಿಗಲಿದೆ.

ಇದೇ ವೇಳೆ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ಎಂಎಸ್ ಧೋನಿ ಮಂಗಳವಾರ, ಮಾರ್ಚ್ 5ರಂದು 2024ರ ಐಪಿಎಲ್ ಆರಂಭಕ್ಕೂ ಮುನ್ನ ಚೆನ್ನೈಗೆ ಆಗಮಿಸಿ ತಮ್ಮ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್‌ಗೆ ಸಿದ್ಧತೆಗಳು ಆರಂಭಗೊಂಡಿವೆ.

ಭಾರತೀಯ ಮಾಜಿ ನಾಯಕ ಎಂಎಸ್ ಧೋನಿ ಮರಳಿ ತಮ್ಮ ಕೂದಲನ್ನು ಉದ್ದವಾಗಿ ಬೆಳೆಸುವ ಮೂಲಕ ಹಳೆಯ ದಿನಗಳನ್ನು ನೆನಪಿಸುತ್ತಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನ ಹೊಸ ಋತುವಿನಲ್ಲಿ ಎಂಎಸ್‌ಡಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಮ್ಮ ಅಭಿಮಾನಿಗಳ ಹೃದಯವನ್ನು ಗೆಲ್ಲಲು ಸಿದ್ಧರಾಗಿದ್ದಾರೆ. ಇತ್ತೀಚೆಗಷ್ಟೇ ಎಂಎಸ್ ಧೋನಿ ತಮ್ಮ ಫೇಸ್‌ಬುಕ್‌ನಲ್ಲಿ ಕ್ರಿಪ್ಟಿಕ್ ಪೋಸ್ಟ್ ಒಂದನ್ನು ಹಾಕಿದ್ದರು.

ಮುಂಬರುವ ಐಪಿಎಲ್ ಲೆಜೆಂಡ್ ವಿಕೆಟ್‌ಕೀಪರ್-ಬ್ಯಾಟರ್‌ಗೆ ಕೊನೆಯ ಆವೃತ್ತಿಯಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ. ಎಂಎಸ್ ಧೋನಿ 2023ರ ಐಪಿಎಲ್ ಆವೃತ್ತಿಯಲ್ಲಿ ದೇಶಾದ್ಯಂತ ಅಪಾರ ಪ್ರೀತಿಯನ್ನು ಪಡೆದ ನಂತರ, ತಮ್ಮ ಅಭಿಮಾನಿಗಳಿಗೆ ಮತ್ತೊಂದು ಆವೃತ್ತಿ ಆಡುವುದಾಗಿ ಭರವಸೆ ನೀಡಿದ್ದರು.

By navakarnatakatimes

NKT (Navakarnataka Times) News Kannada is a news and media company based in Vijayapura, Belgaum Karnataka. Its registration with the Government of India

Leave a Reply

Your email address will not be published. Required fields are marked *